ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಗ್ಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಬೆಂಗಳೂರಿನ 5 ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ರೇಡ್ ಮಾಡಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಬಹುತೇಕ ರಿಯಲ್ ಎಸ್ಟೇಟ್ ಹಾಗೂ ಬಿಲ್ಡರ್ ಗಳನ್ನು ಗುರಿಯಾಗಿಸಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬಿಲ್ಡರ್ ಗಳ ಹಣದ ಟ್ರಾನ್ಸ್ಫರ್ ಬಗ್ಗೆ ನಿಗಾವಹಿಸಿದ್ದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಲ್ಡರ್ಸ್ ಗಳ ನಿವಾಸ ಹಾಗೂ ಕಛೇರಿಗಳನ್ನ ಕೇಂದ್ರೀಕರಿಸಿ ದಾಳಿ ಮಾಡಲಾಗಿದೆ. ಡಾಕ್ಯುಮೆಂಟ್ಸ್ ಪರಿಶೀಲನೆ ನಡೆಸಿದ್ದು, ಕೆಲವು ಮಹತ್ವದ ದಾಖಲೆಗಳನ್ನ ಸೀಜ್ ಮಾಡಲಾಗಿದೆ. 15 ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ