Film & EntertainmentKannada NewsLatest

*ನಟ ವಿಜಯ್ ದೇವರಕೊಂಡ ಕಾರು ಭೀಕರ ಅಪಘಾತ*

ಪ್ರಗತಿವಾಹಿನಿ ಸುದ್ದಿ: ಟಾಲಿವುಡ್ ಖ್ಯಾತ ನಟ ವಿಜಯ್ ದೇವರಕೊಂಡ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದ ಗದ್ವಾಲ್ ಜಿಲ್ಲೆಯ ಉಂಡವಳ್ಳಿ ಬಳಿ ಅಪಘಾತ ಸಂಭವಿಸಿದೆ. ಕುರಿಗಳನ್ನು ಸಾಗಿಸುತ್ತಿದ್ದ ಟ್ರಕ್ ಹಠಾತ್ ಬ್ರೇಕ್ ಹಾಕಿದ್ದರಿಂದ ಈ ಅಪಘಾತ ಸಂಭವಿಸಿದೆ. ವಿಜಯ್ ಅವರ ಕಾರಿನ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೊಲೆರೊ ಪಿಕಪ್ ಟ್ರಕ್ ಗೆ ಡಿಕ್ಕಿಹೊಡೆದು ಬಳಿಕ ವಿಜಯ್ ಕಾರಿಗೆ ಗುದ್ದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ವಿಜಯ್ ದೇವರಕೊಂಡ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಜಯ್ ದೇವರಕೊಂಡ ಪುಟ್ಟಪರ್ತಿಯಿಂದ ಹೈದರಾಬಾದ್ ಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ವಿಜಯ್ ದೇವರಕೊಂಡ ಬೇರೊಂದು ಕಾರಿನಲ್ಲಿ ತೆರಳಿದ್ದಾರೆ. ವಿಜಯ್ ಕಾರು ಚಾಲಕ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button