ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುಂದುವರಿಯಲಿದ್ದು, ಹವಾಮಾನ ಇಲಾಖೆಯು 14 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಈ ಮೂಲಕ ಎಲ್ಲಡೆ ಕಟ್ಟೆಚ್ಚ ಘೋಷಣೆ ಮಾಡಲಾಗಿದೆ.
ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಹಗುರವಾಗಿ ಮಳೆಯಾಗಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಅ. 26ರವರೆಗೂ ಮಳೆ ಮುಂದುವರಿಯಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮಳೆ ಜೋರಾಗುವ ಸಂಭವವಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ