
ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ಎಂಎಲ್ ಸಿ ಐವನ್ ಡಿಸೋಜ ಮನೆ ಮೇಲೆ ದಾಳಿ ನಡೆಸಿ, ಕಲ್ಲುತೂರಾಟ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ತಡರಾತ್ರಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ ನಡೆಸಿ, ಪರಾರಿಯಾಗಿದ್ದಾರೆ.
ಘಟನೆಯಲ್ಲಿ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಪಾಂದವೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.