ಪ್ರಗತಿವಾಹಿನಿ ಸುದ್ದಿ; ವಾಷಿಂಗ್ಟನ್: ಅಮೆರಿಕ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕಾ ಟ್ರಂಪ್ ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ಫೋಟೋವನ್ನು ಶೇರ್ ಮಾಡಿದ್ದಾರೆ.
2017ರಲ್ಲಿ ಹೈದರಾಬಾದ್ ನಲ್ಲಿ ನಡೆದ ಜಾಗತಿಕ ಉದ್ಯಮ ಶೃಂಗದಲ್ಲಿ ಇವಾಂಕಾ ಭಾಗವಹಿಸಿದ್ದರು. ಪ್ರಧಾನಿ ಮೋದಿ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಫೋಟೋವನ್ನು ಇವಾಂಕಾ ಹಂಚಿಕೊಂಡಿದ್ದಾರೆ.
ಕೊರೊನಾದಂತಹ ಸಂಕಷ್ಟದ ಸಂದರ್ಭದಲ್ಲಿ ದೇಶ-ದೇಶಗಳ ನಡುವಿನ ಸಹಕಾರ ಅಗತ್ಯ ಎಂದು ಇವಾಂಕಾ ಅಭಿಪ್ರಾಯಪಟ್ಟಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ