
ಪ್ರಗತಿವಾಹಿನಿ ಸುದ್ದಿ: ಸಿ.ಪಿ.ಐ.(ಎಮ್) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರು,ಕರ್ನಾಟಕ ಪ್ರಾಂತ ರೈತಸಂಘದ ರಾಜ್ಯಾಧ್ಯಕ್ಷರು ಸಂಯುಕ್ತ ಹೋರಾಟ -ಕರ್ನಾಟಕ ಇದರ ಸಂಯೋಜಕರಾದ ಜೆ.ಸಿ.ಬಯ್ಯರೆಡ್ಡಿ ಅವರು ಇಂದು ಮುಂಜಾನೆ 3-00 ಗಂಟೆಗೆ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇವರ ಪಾರ್ಥಿವ ಶರೀರವನ್ನು ಬೆಳಗ್ಗೆ 6-00ಯಿಂದ ಸಂಜೆ 4-00 ಗಂಟೆಯವರೆಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಸಿ.ಪಿ.ಐ.( ಎಮ್) ಪಕ್ಷದ ರಾಜ್ಯ ಕಛೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ನೂತನ ರಾಜ್ಯ ಕಾರ್ಯದರ್ಶಿ ಡಾ. ಕೆ.ಪ್ರಕಾಶ್ ತಿಳಿಸಿದ್ದಾರೆ.
ಕರ್ನಾಟಕದ ಐಕ್ಯ ಹೋರಾಟಕ್ಕೆ ಬಲ ತುಂಬಿದ ಜೆ.ಸಿ.ಬಯ್ಯರೆಡ್ಡಿಯವರ ನಿಧನ ಕರ್ನಾಟಕದ ಚಳುವಳಿಗೆ ತುಂಬಲಾರದ ನಷ್ಟ. ಅವರು ಮತ್ತೆ ಹುಟ್ಟಿ ಬರಲಿ ಎಂದು ಆಶಿಸುತ್ತಾ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ ಹಾಗೂ ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಕಿರಣ್ ಪುಣಚ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಯ್ಯಾರೆಡ್ಡಿ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ. ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದದಿಂದ ದು:ಖಿತನಾಗಿದ್ದೇನೆ.
ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದ ಬಯ್ಯಾರೆಡ್ಡಿಯವರು ಒಬ್ಬ ದಣಿವರಿಯದೆ ಇದ್ದ ಜನಪರ ಹೋರಾಟಗಾರ.
ಅವರ ಕುಟುಂಬ ವರ್ಗ ಮತ್ತು ಹಿತೈಷಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ