Kannada NewsKarnataka NewsLatestPolitics

ಆರ್.ಅಶೋಕ್ ಗೆ ಜೆ.ಪಿ.ನಡ್ಡಾ ಕ್ಲಾಸ್!

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಭಾರತೀಯ ಜನತಾ ಪಾರ್ಟಿಯ ರಾಜ್ಯ ಅಧ್ಯಕ್ಷ ಆರ್.ಅಶೋಕ್ ಸೋಮವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನುಭೇಟಿಯಾದರು.

ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಕಾರ್ಯನಿರ್ವಹಿಸಬೇಕಾದ ರೀತಿ- ನೀತಿ ಕುರಿತು ನಡ್ಡಾ ಅವರು ಅಶೋಕ್ ಗೆ ಪಾಠ ಮಾಡಿದರು.

`ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಾಯಿತು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನಗಳಲ್ಲಿ ಎನ್ ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿ ಮಾಡುವ ನಿಟ್ಟಿನಲ್ಲಿ ನಡ್ಡಾ ಅವರ ಸಲಹೆ, ಮಾರ್ಗದರ್ಶನ ಪಡೆಯಲಾಯಿತು’ ಎಂದು ಅಶೋಕ ತಿಳಿಸಿದ್ದಾರೆ.

Home add -Advt

Related Articles

Back to top button