Belagavi NewsBelgaum NewsKannada NewsKarnataka NewsLatestPolitics

*ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಬಂದಿಳಿದ ನಡ್ಡಾ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕುಂದಾನಗರಿ ಬೆಳಗಾವಿಗೆ ಆಗಮಿಸಿದ್ದಾರೆ. ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಬಂದಿಳಿದ ಜೆ.ಪಿ.ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ವಾಗತಿಸಿದರು.

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜೆ.ಪಿ.ನಡ್ಡಾ ಅವರನ್ನು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೂ ಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಸಂಸದೆ ಮಂಗಳಾ ಅಂಗಡಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆಗಮನ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. Z+ ಭದ್ರತೆ ಹಾಗೂ ಸಿಆರ್ ಪಿಎಫ್ ಸಿಬ್ಬಂದಿಗಳನ್ನು ಹೆಚ್ಚಿನ ಭದ್ರತೆಗೆ ನಿಯೋಜಿಸಲಾಗಿದೆ.

Related Articles

Back to top button