Latest

ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ ವಿರುದ್ಧ ಪ್ರಕರಣ ದಾಖಲು

ಕಲ್ಯಾಣ್ ಸಿಂಗ್ ಅಂತ್ಯಕ್ರಿಯೆ ವೇಳೆ ರಾಷ್ಟ್ರಧ್ವಜಕ್ಕೆ ಅಪಮಾನ

 

ಪ್ರಗತಿವಾಹಿನಿ ಸುದ್ದಿ; ಲಕ್ನೋ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.

ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅಂತ್ಯಕ್ರಿಯೆ ವೇಳೆ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸುವಾಗ ರಾಷ್ಟ್ರ ಧ್ವಜಕ್ಕೆ ಅವಮಾನಿಸಿದ ಆರೋಪ ನಡ್ಡಾ ವಿರುದ್ಧ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಚಂದ್ರ ಕಿಶೋರ್ ಪರಾಶರ್ ದೂರು ನೀಡಿದ್ದರು.

ಮುಜಾಫರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ. ಕಲ್ಯಾಣ್ ಸಿಂಗ್ ಅಂತ್ಯಕ್ರಿಯೆ ವೇಳೆ ರಾಷ್ಟ್ರಧ್ವಜದ ಮೇಲೆ ಬಿಜೆಪಿ ಬಾವುಟ ಇಟ್ಟಿದ್ದರು. ಇದನ್ನು ವಿರೋಧಿಸಿ ಜೆ.ಪಿ.ನಡ್ಡಾ ವಿರುದ್ಧ ದೂರು ದಾಖಲಿಸಲಾಗಿತ್ತು. ಉದ್ದೇಶಪೂರ್ವಕವಾಗಿ ಬಿಜೆಪಿ ನಾಯಕರು ಈ ರೀತಿ ನಡೆದುಕೊಂಡಿದ್ದಾಗಿ ನ್ಯಾಯಲಯಕ್ಕೆ ದೂರಲಾಗಿದೆ.

Home add -Advt

ಡಿ.ಕೆ.ಶಿವಕುಮಾರ್ ವಿರುದ್ಧ ವಾರಂಟ್ ಜಾರಿ

Related Articles

Back to top button