Kannada NewsKarnataka NewsNationalPolitics
*ಜಾಫರ್ ಎಕ್ಸ್ ಪ್ರೆಸ್ ಹೈಜಾಕ್ ಪ್ರಕರಣ: 30 ಸೈನಿಕರ ಹತ್ಯೆ ಮಾಡಿದ ಉಗ್ರರು*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನದ ಜಾಫರ್ ಎಕ್ಸ್ ಪ್ರೆಸ್ ರೈಲನ್ನು ಬಲೂಚಿಸ್ತಾನದಲ್ಲಿ ಅಪಹರಿಸಿ ಎಲ್ಲಾ ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿರುವ ಹೊಣೆಯನ್ನು ಬಲೂಚಿಸ್ತಾನ ಲಿಬರೇಶನ್ ಆರ್ಮಿ ಹೊತ್ತುಕೊಂಡಿದೆ.
ಈವರೆಗೆ 30 ಮಿಲಿಟರಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಮತ್ತು 214 ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಲಾಗಿದೆ ಎಂದು ಹೇಳಲಾಗಿದೆ.
ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಕ್ಕೆ ಪ್ರತಿಯಾಗಿ ಎಲ್ಲಾ ಬಲೂಚ್ ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಲು BLA ಪಾಕಿಸ್ತಾನಕ್ಕೆ 48 ಗಂಟೆಗಳ ಅಂತಿಮ ಗಡುವು ನೀಡಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ.