Latest

ನಾಯಕತ್ವ ಬದಲಾವಣೆ ಚರ್ಚೆ ಸರ್ಕಾರದ ಇಮೇಜಿಗೆ ಧಕ್ಕೆ ಎಂದ ಶೆಟ್ಟರ್

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಪದೇ ಪದೇ ನಾಯಕತ್ವ ಬದಲಾವಣೆ ಚರ್ಚೆ ನಡೆಸುತ್ತಿರುವುದು ಸರ್ಕಾರದ ಇಮೇಜಿಗೆ ಧಕ್ಕೆಯಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮತ್ತೆ ಬರುವುದರಿಂದ ಆಡಳಿತಕ್ಕೆ ಹೊಡೆತ ಬೀಳುವಂತಾಗುತ್ತದೆ. ಹಾಗಾಗಿ ಇಂತಹ ಹೇಳಿಕೆಗಳಿಗೆ ಕೊನೆ ಹಾಡಬೇಕಿದೆ. ಬದಲಾವಣೆ ವಿಚಾರ ಎಲ್ಲಿಂದ ಶುರುವಾಗಿದೆ ಎಂಬುದು ಪಕ್ಷದ ಪ್ರಶ್ನೆಯಾಗಿದೆ ಎಂದರು.

Home add -Advt

ಪದೇ ಪದೇ ಸಿಎಂ ಬದಲಾವಣೆ ಪ್ರಸ್ತಾಪ ಯಡಿಯೂರಪ್ಪನವರ ಮನಸ್ಸಿಗೆ ನೋವು ತಂದಿದೆ. ಹೀಗಾಗಿ ಅವರು ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ಎಂದು ಹೇಳಿದ್ದಾರೆ. ಈ ವಯಸ್ಸಿನಲ್ಲಿಯೂ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಆಡಳಿತ ಸುಸೂತ್ರವಾಗಿ ನಡೆಯುತ್ತಿದೆ. ಕೋವಿಡ್ ಸಂಕಷ್ಟಗಳನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಹೇಳಿದರು.
ಮಕ್ಕಳ ಮೇಲೂ ಆರಂಭವಾಯ್ತು ಲಸಿಕೆ ಪ್ರಯೋಗ

Related Articles

Back to top button