Latest

ಡಿಕೆಶಿ ಸಹ ಪ್ರಮಾಣವಚನಕ್ಕೆ ಹೋಗಲಿದ್ದಾರೆ

*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

Home add -Advt

ರಾಜ್ಯ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಸೋಮವಾರ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 7 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ರಾಜಸ್ಥಾನಕ್ಕೆ ತೆರಳಲಿರುವ ಸಚಿವರು ನೂತನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹಾಗೂ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 12 ಗಂಟೆಗೆ ಜೈಪುರದಿಂದ ಹೊರಟು 1 ಗಂಟೆಗೆ ಭೋಪಾಲ್ ಗೆ ತೆರಳಿ, ಮುಖ್ಯಮಂತ್ರಿ ಕಮಲನಾಥ್ ಹಾಗೂ ಡಿಸಿಎಂ ಜ್ಯೋತಿರಾದಿತ್ಯ ಸಿಂಧ್ಯ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಂಜೆ 4.30ಕ್ಕೆ ಭೋಪಾಲ್ ನಿಂದ ಬೆಳಗಾವಿಗೆ ಆಗಮಿಸಿ, 18 ರಿಂದ ವಿಧಾನ ಮಂಡಲ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Related Articles

Back to top button