ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾಂಗ್ರೆಸ್ ನಾಯಕರು ಬೆಲೆ ಏರಿಕೆಯನ್ನು ಮುಂದಿಟ್ಟುಕೊಂಡು ಅದನ್ನೇ ಪ್ರಮುಖ ವಿಷಯವನ್ನಾಗಿ ಮಾಡಿ ಚುನಾವಣೆ ಎದುರಿಸಲು ಹೊರಟಿದ್ದಾರೆ. ಆದರೆ ಬೆಲೆ ಏರಿಕೆ ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಬೆಲೆ ಏರಿಕೆ ಚುನಾವಣೆಯಲ್ಲಿ ಪರಿಣಾಮ ಬೀರಲ್ಲ. ನಾವು ಪ್ರಚಾರಕ್ಕೆ ಹೋದಾಗ ಯಾರೂ ಬೆಲೆ ಏರಿಕೆ ಪ್ರಶ್ನಿಸಿಲ್ಲ. ಕಾಂಗ್ರೆಸ್ ನವರು ನಡೆಸುತ್ತಿರುವ ತಂತ್ರ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಪ್ರತಿಯೊಂದು ಕ್ಷೇತ್ರದಲ್ಲೂ ಬಿಜೆಪಿಗೆ ಹೆಚ್ಚಿನ ಲೀಡ್ ಬರುತ್ತದೆ. ಪ್ರಧಾನಿ ಮೋದಿ ನಾಯಕತ್ವವನ್ನು ಎಲ್ಲಾ ಸಮಾಜದದ ಜನರು ಬೆಂಬಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
ಮಾಜಿ ಸಚಿವ ಯು.ಟಿ.ಖಾದರ್ ಕಾರು ಅಪಘಾತ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ