Kannada NewsKarnataka NewsLatestPolitics

*ಕಾಂಗ್ರೆಸ್ ಗೆ ಕೈ ಕೊಟ್ಟ ಶೆಟ್ಟರ್; ಬಿಜೆಪಿಗೆ ಅಧಿಕೃತವಾಗಿ ಮರಳಿ ಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತಿದ್ದಂತೆ ರಾಜ್ಯ ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.

ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಮರು ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉಪಸ್ಥಿತರಿದ್ದರು.

Home add -Advt

ಅಮಿತ್ ಶಾ ಭೇಟಿ ಬಳಿಕ ಬಿಜೆಪಿ ಕಚೆರಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಧಿಕೃತವಾಗಿ ಬಿಜೆಪಿಗೆ ಮರಳಿ ಸೇರ್ಪಡೆಯಾದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಿಜೆಪಿ ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು.

Related Articles

Back to top button