*ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್; ಬಿಜೆಪಿಯಲ್ಲಿ ಕನಿಷ್ಠ ಗೌರವವೂ ಕೊಡಲಿಲ್ಲ ಎಂದ ಮಾಜಿ ಸಿಎಂ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಜಗದೀಸ್ ಶೆಟ್ಟರ್ ಇಂದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಮಾಜಿ ಸಿಎಂ ಜಗದೀಸ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾದರು.
ಕಾಂಗ್ರೆಸ್ ಸೇರ್ಪಡೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿದ್ದೇನೆ. ಬಿಜೆಪಿಯನ್ನು ಕಟ್ಟಿ ಬೆಳೆಸಿದ ಹಿರಿಯ ನಾಯಕರಿಗೆ ಗೌರವ ಕೊಡಲಿಲ್ಲ. ಇದು ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ರೀತಿ ಸರಿಯೇ? ಈ ಬಾರಿ ನನಗೆ ಟಿಕೆಟ್ ಇಲ್ಲ ಎಂದಾಗ ಆಘಾತವಾಯಿತು. ಎಲ್ಲಾ ರೀತಿಯಲ್ಲಿಯೂ ಇದೊಂದು ಬಾರಿ ಟಿಕೆಟ್ ನೀಡಿ, ಬೇರೆ ಯಾವುದೇ ಹುದ್ದೆ ಆಕಾಂಕ್ಷಿ ನಾನಲ್ಲ ಎಂಬುದನ್ನು ಪರಿ ಪರಿಯಾಗಿ ಹೇಳಿದೆ. ಆದರೂ ಟಿಕೆಟ್ ನಿದಲು ಒಪ್ಪಲಿಲ್ಲ. ಬಿಜೆಪಿ ನನಗೆ ಎಲ್ಲ ಸ್ಥಾನಮಾನ ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ನಾನು ಪಕ್ಷವನ್ನು ಪ್ರಾಮಾಣಿಕವಾಗಿ ಕಟ್ಟಿ ಬೆಳಸಿದ್ದೇನೆ. ಪಕ್ಷಕ್ಕಾಗಿ ದುಡಿದಿದ್ದೇನೆ. ಆದರೆ ಬಿಜೆಪಿಯಲ್ಲಿ ಕೆಲ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಿರಿಯ ನಾಯಕರನ್ನು ಕಡೆಗಣಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯಲ್ಲಿ ಕನಿಷ್ಠ ಗೌರವವನ್ನೂ ಕೊಡುತ್ತಿಲ್ಲ. ತುಂಬಾ ಅನ್ಯಾಯವಾಗಿದೆ. ನಮ್ಮ ಮನೆಯಲ್ಲಿ ನಮ್ಮನ್ನೇ ಹೊರ ಹಾಕುತ್ತಿದ್ದಾರೆ ಎಂದ ಮೇಲೆ ಅಲ್ಲಿ ಇರುವುದು ಸ್ವಾಭಿಮಾನಕ್ಕೆ ಧಕ್ಕೆಯಾಗುತ್ತದೆ. ಅನಿವಾರ್ಯವಾಗಿ ಪಕ್ಷ ತೊರೆಯುವ ನಿರ್ಧಾರ ಮಾಡಿದೆ ಎಂದು ನೊಂದು ನುಡಿದರು
ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಣದೀಪ್ ಸುರ್ಜೇವಾಲಾ, ಎಂ.ಬಿ.ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ