
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮಿಪಿಸುತ್ತಿರುವಂತೆಯೇ ರಾಜ್ಯ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆಯಾಗಿದ್ದು, ಮಾಜಿ ಸಿಎಂ ಜಗದೀಶ್ ಶೆತ್ಟರ್ ಮರಳಿ ಬಿಜೆಪಿ ಸೇರಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ನಂತರ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.
ದೆಹಲಿಯ ಅಮಿತ್ ಶಾ ಅವರ ನಿವಾಸದಲ್ಲಿ ಹೈ ವೋಲ್ಟೇಜ್ ಮೀಟಿಂಗ್ ನಡೆದಿದ್ದು, ಈ ವೇಳೆ ಜಗದೀಶ್ ಶೆಟ್ಟರ್ ಕೂಡ ಸಭೆಯಲ್ಲಿ ಭಾಗಿಆಗಿದ್ದಾರೆ. ಮಾತ್ರವಲ್ಲ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.
ನಂತರ ಅಧಿಕೃತವಾಗಿ ಬಿಜೆಪಿ ಸೇರಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ