*ಭರ್ಜರಿ ರೋಡ್ ಶೋ, ಅಬ್ಬರದ ಪ್ರಚಾರ; ಕಾಂಗ್ರೆಸ್ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನದ ಮೂಲಕ ಹುಬ್ಬಳ್ಳಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ವಿಧಾನಸಭಾ ಚುನಾವಣಾ ಅಖಾಡ ಕ್ಷಣ ಕ್ಷಣಕ್ಕೂ ರಂಗೇರುತ್ತಿದ್ದು, ಇಂದು ಘಟಾನುಘಟಿ ನಾಯಕರು ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಇತ್ತೀಚೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಜಗದೀಶ್ ಶೆಟ್ಟರ್ ಕ್ಷೇತ್ರದಲ್ಲಿ ಭರ್ಜರಿ ರೋಡ್ ಶೋ ಮೂಲಕ ಚುನಾವಣಾ ಪ್ರಚಾರ ನಡೆಸಿದರು. ಶೆಟ್ಟರ್ ಅವರಿಗೆ ಪತ್ನಿ ಶಿಲ್ಪಾ ಶೆಟ್ಟರ್, ಮಲ್ಲಿಕಾರ್ಜುನ ಶಾಮನೂರು, ರಜತ್ ಉಳ್ಳಾಗಡ್ಡಿ ಮಠ ಮೊದಲಾದವರು ಸಾಥ್ ನೀಡಿದರು.
ರೋಡ್ ಶೋ ಬಳಿಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ