ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ಜಗದೀಶ್ ಶೆಟ್ಟರ್ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟ ಸೇರದಿರಲು ನಿರ್ಧರಿಸಿದ್ದಾರೆ. ಈ ಕುರಿತು ಸ್ವತ: ಶೆಟ್ಟರ್ ಹೇಳಿಕೆ ನೀಡಿದ್ದು ಅಚ್ಚರಿಗೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ನಾನು ಬೊಮ್ಮಾಯಿ ಸಂಪುಟಕ್ಕೆ ಸೇರುವುದಿಲ್ಲ. ನಾನು ಓರ್ವ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕನಿದ್ದೇನೆ, ಪಕ್ಷದ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಕೆಲಸ ಮಾಡುತ್ತೆನೆ ಹೊರತು ಸಂಪುಟ ಸೇರುವುದಿಲ್ಲ ಎಂದಿದ್ದಾರೆ.
ಇದು ನನ್ನ ವೈಯಕ್ತಿಕ ನಿರ್ಧಾರ ಬೇರೆ ಯಾವುದೇ ಉದ್ದೇಶವಿಲ್ಲ. ಒಂದು ವೇಳೆ ಪಕ್ಷದ ವರಿಷ್ಠರು ಜವಾಬ್ದಾರಿ ಕೊಟ್ಟರೆ ನಿರ್ವಹಿಸುತ್ತೇನೆ. ನನ್ನ ನಿರ್ಧಾರದ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಹಾಗೂ ಸಿಎಂ ಬೊಮ್ಮಾಯಿ ಗಮನಕ್ಕೂ ತಂದಿದ್ದೇನೆ ಎಂದು ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಬಾಂಬ್ ನಿಜವಾಯ್ತಾ? ಎಂಬ ಚರ್ಚೆ ಆರಂಭವಾಗಿದೆ.
ನೂತನ ಮುಖ್ಯಮಂತ್ರಿಯಿಂದ ಮಹತ್ವದ ಘೋಷಣೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ