*ಬಿಜೆಪಿ ಘಟಾನುಘಟಿ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಜ್ಜು; ಮುಹೂರ್ತ ಫಿಕ್ಸ್*
ಕೇಸರಿ ಪಾಳಯದಲ್ಲಿ ಸಂಚಲನ ಮೂಡಿಸಿದ ಶೆಟ್ಟರ್ ಹೇಳಿಕೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಆಪರೇಷನ್ ಹಸ್ತಕ್ಕೆ ಚಾಲನೆ ನೀಡಿದೆ. ಘಟನಾನುಘಟಿ ಬಿಜೆಪಿ ನಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂಚಲನ ಮೂಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿಯ ಹಲವು ಮಾಜಿ ಶಾಸಕರುಗಳು ನನ್ನ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ನಾನು ಬಿಜೆಪಿಯಲ್ಲಿ ರಾಜ್ಯಾದ್ಯಕ್ಷ, ಮಾಜಿ ಸಿಎಂ ಆಗಿದ್ದ ಕಾರಣಕ್ಕೆ ಅವರೆಲ್ಲರೂ ನೇರವಾಗಿ ನನ್ನ ಸಂಪರ್ಕ ಮಾಡಿದ್ದಾರೆ. ಬಿಜೆಪಿಯಲ್ಲಿ ಬೇಸರಗೊಂಡಿರುವ ದೊಡ್ಡ ಗುಂಪೇ ಇದೆ ಎಂದರು.
ಈ ಹಿಂದೆಯೂ ಕಾಂಗ್ರೆಸ್ ಸೇರಲೆಂದು ರಾಮಣ್ಣ ಲಮಾಣಿ ಹಾಗೂ ಎಂ.ಪಿ.ಕುಮಾರಸ್ವಾಮಿ ನನ್ನ ಸಂಪರ್ಕ ಮಾಡಿದ್ದರು. ಈಗ ಮತ್ತೆ ಅವರು ಸಂಪರ್ಕಿಸಿದ್ದರಿಂದ ನಿನ್ನೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಬಳಿ ಕರೆದೊಯ್ದಿದ್ದೆ. ಮುಂದಿನ ವಾರ ಅವರನ್ನು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರಿಸಿಕೊಳ್ಳುತ್ತೇವೆ ಎಂದು ಹೇಳಿದರು.
ಬಿಜೆಪಿಗೆ ನಾಯಕನಿಲ್ಲದಂತಾಗಿದೆ. ಲೀಡರ್ ಲೆಸ್ ಪಾರ್ಟಿ ಹೇಗಿರುತ್ತೆ ಎಂಬುದಕ್ಕೆ ಈಗ ಬಿಜೆಪಿ ಉದಾಹಣೆಯಾಗಿದೆ. ಬಿಜೆಪಿಯಲ್ಲಿ ಅಸಮಾಧನಗೊಂಡವರು ಸಾಕಷ್ಟು ಜನರಿದ್ದಾರೆ. ಯಾರನ್ನು ನಾನು ಬಿಜೆಪಿ ಬಿಟ್ಟು ಬನ್ನಿ ಎಂದು ಒತ್ತಾಯಿಸಿಲ್ಲ. ಅವರಾಗಿಯೇ ಬರುತ್ತಿರುವವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ