Latest

ವಿನಯ್ ಕುಲ್ಕರ್ಣಿ ಬಿಜೆಪಿ ಸೇರ್ಪಡೆ ವಿಚಾರ ಚರ್ಚೆಯೇ ಆಗಿಲ್ಲ ಎಂದ ಕೈಗಾರಿಕಾ ಸಚಿವ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ವಿನಯ್ ಕುಲ್ಕರ್ಣಿ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿಲ್ಲ. ನನ್ನ ಗಮನಕ್ಕೂ ಬಂದಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ ಆ ರೀತಿ ಸೇರ್ಪಡೆ ಸಾಧ್ಯವಿಲ್ಲ. ಈ ಬಗ್ಗೆ ನಮ್ಮ ಪಕ್ಷದಲ್ಲಿ ಚರ್ಚೆ ಆಗಿಲ್ಲ. ಅವರು ಪಕ್ಷಕ್ಕೆ ಬರುತ್ತಾರೆ ಎನ್ನುವುದಾದರೆ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡೆ ಮಾಡ್ತಾರೆ. ನಾನು ಇದೇ ಜಿಲ್ಲೆಯ ಜನಪ್ರತಿನಿಧಿ. ಅಂತಹ ಯಾವುದೇ ಚರ್ಚೆ ನನ್ನ ಗಮನಕ್ಕೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆರ್ ದಿಲೀಪ್ ಹಾಗೂ ಡಿಸಿಪಿ ಕೃಷ್ಣಕಾಂತ್ ನಡುವಿನ ಕೋಲ್ಡ್ ವಾರ್ ವಿಚಾರವಾಗಿ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಈ ವಿಚಾರ ನನ್ನ ಗಮನಕ್ಕೆ ಬಂದಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಈ ಬಗ್ಗೆ ನಾನು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button