

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ವಿಧಾನ ಪರಿಷತ್ ನೂತನ ಸದಸ್ಯರಾಗಿ ಕಾಂಗ್ರೆಸ್ ನ ಮೂವರು ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪರಿಷತ್ ಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಹಾಗೂ ಬೋಸರಾಜು ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಸಿಎಂ ಸಿದ್ದರಾಮಯ್ಯ, ಬಸವರಾಜ್ ಹೊರಟ್ಟಿ, ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ