Kannada NewsKarnataka NewsLatestPolitics

*ಪರಿಷತ್ ಸದಸ್ಯ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಇದೀಗ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಿ ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನಾನು ಮರಳಿ ಬಿಜೆಪಿಗೆ ಸೇರ್ಪಡೆಯಾಗಿದ್ದು ಬಹಳ ಸಂತಸ ತಂದಿದೆ ಎಂದರು.

ನಾನು ಬಿಜೆಪಿಗೆ ವಾಪಾಸ್ ಆಗಬೇಕು ಎಂಬುದು ಹಲವು ನಾಯಕರ ಅಪೇಕ್ಷೆಯಾಗಿತ್ತು. ಅದರಂತೆ ಇಂದು ಅಮಿತ್ ಶಾ ಭೇಟಿಯಾಗುವಂತೆ ಆಹ್ವಾನ ನೀಡಿದ್ದರು. ಹಾಗಾಗಿ ಭೇಟಿಯಾಗಿದ್ದೆ. ಅತ್ಯಂತ ಗೌರವವಾಗಿ ಬರಮಾಡಿಕೊಂಡರು. ದೇಶದ ಹಿತದೃಷ್ಟಿಯಿಂದ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದೇನೆ. ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಹೇಳಿದರು.

ನಾನು ಈಗಾಗಲೇ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಇ-ಮೇಲ್ ಮೂಲಕ ರಾಜಿನಾಮೆ ಸಲ್ಲಿಸಿದ್ದೇನೆ. ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಕೊಟ್ಟಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೂ ರಾಜೀನಾಮೆ ಪತ್ರ ರವಾನಿಸಿದ್ದೇನೆ ಎಂದು ತಿಳಿಸಿದರು.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button