Kannada NewsKarnataka NewsLatestPolitics
*ಸರ್ಕಾರಕ್ಕೆ ರಾಜೀನಾಮೆ ಎಚ್ಚರಿಕೆ ಕೊಟ್ಟ ಮತ್ತೋರ್ವ ಕಾಂಗ್ರೆಸ್ ಶಾಸಕ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಶಾಸಕ ಯಶವಂತಗೌಡ ಪಾಟೀಲ್ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೋರ್ವ ಶಾಸಕ ಸರ್ಕಾರಕ್ಕೆ ರಾಜೀನಾಮೆ ಎಚ್ಚರಿಕೆ ಕೊಟ್ಟಿದ್ದಾರೆ.
ದಾವಣಗೆರೆ ಜಿಲ್ಲೆ ಜಗಳೂರು ಕ್ಷೇತ್ರದ ಶಾಸಕ ದೇವೇಂದ್ರಪ್ಪ, ರೈತರಿಗೆ ನೀಡಬೇಕಾದ ಹಣ ನಿಡದಿದ್ದರೆ ನಾನು ರಾಜಿನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆ. ರೈತರಿಗೆ ಬರ ಪರಿಹಾರದ ಹಣ ತಕ್ಷಣ ನಿಡುವಂತೆ ಒತ್ತಾಯಿಸಿದ್ದಾರೆ.
ಈ ಹಿಂದೆ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ನೀರು ಬಿಡದಿದ್ದರೆ ರಾಜೀನಾಮೆ ನೀದುವುದಾಗಿ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಶಾಸಕ ದೇವೇಂದ್ರಪ್ಪ ರೈತರಿಗೆ ಹಣ ಕೊಡದಿದ್ದರೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ