Latest

ಕಾಂಗ್ರೆಸ್ ಸೇರಲು ವಿಶೇಷ ವಿಮಾನದಲ್ಲಿ ಹೊರಟ ಜಗದೀಶ ಶೆಟ್ಟರ್

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ 6 ಸೀಟರ್ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.

ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದೇ ಕಾಂಗ್ರೆಸ್ ಸೇರಲಿದ್ದಾರೆ ಎಂದು ಗೊತ್ತಾಗಿದೆ.

ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಶೆಟ್ಟರ್ ಅವರಿಗೆ ಹುಬ್ಬಳ್ಳಿ – ಧಾರವಾಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಮಠ ಮತ್ತು ಇನ್ನಿತರ ಕೆಲವು ಕಾಂಗ್ರೆಸ್ ಪ್ರಮುಖರು ಸಾಥ್ ನೀಡಿದ್ದಾರೆ. ವಿಮಾನವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಸಿವಕುಮಾರ ಅವರೇ ವ್ಯವಸ್ಥೆ ಮಾಡಿದ್ದಾರೆ ಎಂದು ಗೊತ್ತಾಗಿದೆ.

ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ನಂತರ ಅವರು ಕಾಂಗ್ರೆಸ್ ಸೇರಲಿದ್ದಾರೆ.

https://pragati.taskdun.com/jagadish-shettarreactionb-s-yedyurappastatment/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button