ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಟಿಕೆಟ್ ನೀಡದ ಕಾರಣಕ್ಕೆ ಬಿಜೆಪಿ ಜೊತೆ ಶಾಶ್ವತ ಸಂಬಂಧ ಕಡಿದುಕೊಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಾಂಗ್ರೆಸ್ ಕಚೇರಿ ಸೇರಿದ್ದಾರೆ. ಅವರ ಕಾಂಗ್ರೆಸ್ ಸೇರ್ಪಡೆ ಪ್ರಕ್ರಿಯೆ ಇದೀಗ ಕೆಪಿಸಿಸಿ ಕಚೇರಿಯಲ್ಲಿ ಆರಂಭವಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಅವರು ಕಾಂಗ್ರೆಸ್ ಸೇರುವ ಪ್ರಕ್ರಿಯೆ ಮುಂದುವರಿದಿದೆ. ಭಾನುವಾರ ತಡರಾತ್ರಿಯೇ ಅವರು ರಣದೀಪ್ ಸುರ್ಜೆವಾಲಾ, ಸಿದ್ದರಾಮಯ್ಯ ಮುಂತಾದವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲು ಶೆಟ್ಟರ್ ಈಗಾಗಲೇ ಕೆಪಿಸಿಸಿ ಕಚೇರಿಗೆ ತೆರಳಿದ್ದಾರೆ.
ಶೆಟ್ಟರ್ ಅವರನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳುವ ಕೊನೆಯ ಪ್ರಯತ್ನಗಳು ವಿಫಲವಾಗಿದ್ದು ರಾಜ್ಯ ಬಿಜೆಪಿಯ ಹಿರಿಯ ಮುಖಂಡರೂ ಕೈಚೆಲ್ಲಿದ್ದಾರೆ. ಆದರೆ ಪಕ್ಷದ ಹೈಕಮಾಂಡ್ ಮಾತ್ರ ಯಾವುದಕ್ಕೂ ಸೊಪ್ಪು ಹಾಕದೆ ಮೌನವಾಗೇ ಶೆಟ್ಟರ್ ಅವರನ್ನು ಪಕ್ಕಕ್ಕೆ ಸರಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ