Belagavi NewsBelgaum NewsKannada NewsKarnataka NewsNationalPolitics

*ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್ ಮತ್ತು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಇವರ ನೇತೃತ್ವದಲ್ಲಿ ರೈಲ್ವೆ, ಏರ್ಪೋರ್ಟ್, ಬೆಳಗಾವಿ ರಿಂಗ್ ರಸ್ತೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಸಭೆ ನಡೆಯಿತು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಪಡೆದುಕೊಂಡರು.

ಬೆಳಗಾವಿ- ಕಿತ್ತೂರು- ಧಾರವಾಡ ನೂತನ ರೈಲ್ವೆ ಮಾರ್ಗ ನಿರ್ಮಾಣ ಬಗ್ಗೆ ಭೂಸ್ವಾಧೀನ ಪ್ರಕ್ರಿಯೆ ಬಗ್ಗೆ ಬೆಳಗಾವಿ ನಗರದಲ್ಲಿ ನಿರ್ಮಿಸಲಾಗುತ್ತಿರುವ  ರಸ್ತೆ ಮೇಲ್ಸೇತುವೆ ಕುರಿತು ಹಾಗೂ ತಾನಾಜಿಗಲ್ಲಿಯ ಹತ್ತಿರ ಅಲ್ಲಿನ ನಿವಾಸಿಗಳ ಬೇಡಿಕೆಯಂತೆ ರಸ್ತೆ ಮೇಲು ಸೇತುವೆ ನಿರ್ಮಾಣ ಮಾಡದೇ ಇರುವ ಬಗ್ಗೆ, ಆಗಬಹುದಾದ ಅನುಕೂಲತೆಗಳ ಕುರಿತು ಚರ್ಚಿಸಲಾಯಿತು. 

ಇನ್ನು ರಿಂಗ್ ರಸ್ತೆ ನಿರ್ಮಾಣ ಅಂಗವಾಗಿ ಝಲಸಾಪುರ ಬಲಗಾ ಮಾರ್ಗ ನಿರ್ಮಾಣದ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಭೂಸ್ವಾಧೀನ  ಪ್ರಗತಿಯ ಕುರಿತು ಚರ್ಚಿಸಿ ನಿರ್ದಿಷ್ಟ ಕಾಲಮಿತಿಯಲ್ಲಿ     ಪ್ರಕ್ರಿಯೆಯನ್ನು ಮುಗಿಸುವಂತೆ ಸಭೆಯಲ್ಲಿ ತಿಳಿಸಲಾಯಿತು. ಅದರಂತೆ ಬೆಳಗಾವಿ (ಶಿಗುಣಸಿ) – ಹುನಗುಂದ – ರಾಯಚೂರು ಮಾರ್ಗದ ಬಗ್ಗೆಯೂ ಮಾಹಿತಿ ಪಡೆಯಲಾಯಿತು.

ಮುಂದುವರೆದು ಬೆಳಗಾವಿ ಏರ್ಪೋರ್ಟ್ ಅಭಿವೃದ್ಧಿ ಕುರಿತು ಚರ್ಚಿಸಲಾಯಿತು. ಅಲ್ಲಿ ಅವಶ್ಯವಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆಯಲಾಯಿತು. ಇನ್ನು, ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಕಿತ್ತೂರು ಪ್ರದೇಶದಲ್ಲಿ ಭೂಸ್ವಾಧೀನ ಪ್ರಕ್ರಿಯೆ ತಡವಾಗುತ್ತಿರುವ ಬಗ್ಗೆ ಅವಲೋಕಿಸಲಾಯಿತು. ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲು KAIDB ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ನೈರುತ್ಯ ರೈಲ್ವೆ ವಲಯ ಅಭಿಯಂತರರು, KAIDB, NHAI ಅಧಿಕಾರಿಗಳು ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button