Kannada NewsKarnataka NewsLatest

*ಬಿಜೆಪಿಯಿಂದ ಅವಮಾನಿತರಾಗಿ ಬಂದಿದ್ದ ಜಗದೀಶ್ ಶೆಟ್ಟರ್: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಆಗಿಲ್ಲ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿರಾಜಪೆಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಗದೀಶ್ ಶೆಟ್ಟರ್ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಮಾತನಾಡಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಸೇರಿದರು. ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದರು. ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಪುನ: ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು. ನಂತರ ನನಗೆ ಅವರು ಸಿಕ್ಕಿಲ್ಲ ಎಂದರು.

ಎಲ್ಲಾ ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ
ಇಂಡಿಯಾ ಒಕ್ಕೂಟದಲ್ಲಿ ಬಿರುಕು ಮೂಡಿರುವ ಬಗ್ಗೆ ಮಾತನಾಡಿ, ಅದನ್ನು ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ ಎಂದರು.

ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್: ಗಂಭೀರ ಪರಿಶೀಲನೆ
ಕೊಡಗಿನ ಕಾಫಿ ಬೆಳೆಗಾರರಿಗೆ 10 ಹೆಚ್.ಪಿ ಉಚಿತ ವಿದ್ಯುತ್ ನೀಡುವ ಬಗ್ಗೆ 2008 ರಿಂದಲೂ ಬೇಡಿಕೆ ಇರುವ ಬಗ್ಗೆ ಮಾತನಾಡಿ ಬೇಡಿಕೆ ಇದೆ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಬಿಜೆಪಿ ಶಾಸಕರೇ ಇಲ್ಲಿದ್ದರೂ ಬೊಪ್ಪಯ್ಯ, ಅಪ್ಪಚ್ಚು ರಂಜನ್ ಅವರು ಈ ಬಗ್ಗೆ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು. ಸಂಸದರೂ ಅವರೇ ಇದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದರು.

ಅಧ್ಯಕ್ಷರು, ಸಿಎಂ,ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ
ಸಚಿವ ಕೆ.ಎನ್ ರಾಜಣ್ಣ ಅವರು ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿ ಬಗ್ಗೆ ನಾವು ಗುಲಾಮರೇ ನಮ್ಮನ್ನು ಕೇಳದೇ ವರಿಷ್ಠರು ನಿರ್ಧಾರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಎಲ್ಲರೂ ಒಂದೊಂದು ಹೆಸರನ್ನು ಹೇಳಿದಾಗ ಕಷ್ಟವಾಗುತ್ತದೆ. ಸಾಮಾನ್ಯವಾಗಿ ಈ ಬಗ್ಗೆ ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ವರಿಷ್ಠರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

ಯತೀಂದ್ರ ಸ್ಪರ್ಧಿಸುವುದಿಲ್ಲ
ಲೋಕಸಭಾ ಚುನಾವಣೆಯಲ್ಲಿ ಕೊಡಗಿನಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

*ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ : ಸಿ.ಎಂ.ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button