Latest

ಜಗ್ಗೇಶ್ ವಿರುದ್ಧ ಸಿಡಿದೆದ್ದ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು

ಪ್ರಗತಿವಾಹಿನಿ ಸುದ್ದಿ; ಮೈಸೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ನಟ ಜಗ್ಗೇಶ್ ಅಭಿನಯದ ತೋತಾಪುರಿ ಚಿತ್ರದ ಶೂಟಿಂಗ್ ಸ್ಪಾಟ್ ಗೆ ತೆರಳಿ, ಜಗ್ಗೇಶ್ ಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಮೈಸೂರಿನ ಬನ್ನೂರು ಬಳಿಯ ಗ್ರಾಮದಲ್ಲಿ ಜಗ್ಗೇಶ್ ಅಭಿನಯದ ತೋತಾಪುರಿ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಶೂಟಿಂಗ್ ಸ್ಪಾಟ್ ಗೆ ಬಂದ ದರ್ಶನ್ ಅಭಿಮಾನಿಗಳು ಏಕಾಏಕಿ ಜಗ್ಗೇಶ್ ಗೆ ಘೇರಾವ್ ಹಾಕಿದ್ದಾರೆ. ದರ್ಶನ್ ಅಭಿಮಾನಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕೆ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

Home add -Advt

ಈ ಬಗ್ಗೆ ಪ್ರತಿಕ್ರಿಯಿಸಿದ ಜಗ್ಗೇಶ್, ನಾನು ದರ್ಶನ್ ಬಗ್ಗೆಯಾಗಲಿ, ಅವರ ಅಭಿಮಾನಿಗಳ ಬಗ್ಗೆ ಯಾಗಲಿ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಯಾರೋ ನನ್ನ ಎಡಿಟ್ ಮಾಡಿ ಆಡಿಯೋ ಹರಿಬಿಟ್ಟಿದ್ದಾರೆ. ಇದರ ಹಿಂದೆ ದೊಡ್ಡ ಹುನ್ನಾರವೇ ಇದೆ ಎಂದು ಹೇಳಿದ್ದಾರೆ. ಆದರೂ ಒಪ್ಪದ ದರ್ಶನ್ ಅಭಿಮಾನಿಗಳು ಜಗ್ಗೇಶ್ ವಿರುದ್ಧ ಘೋಷಣೆ ಕೂಗಲು ಆರಂಭಿಸಿದ್ದಾರೆ. ದರ್ಶನ್ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಕೊನೆಗೂ ಕ್ಷಮೆಯಾಚಿಸಿದ್ದಾರೆ.

ಜಗ್ಗೇಶ್ ವಿರುದ್ಧದ ಆರೋಪವೇನು?:
ಇತ್ತೀಚೆಗೆ ನಟ ಜಗ್ಗೇಶ್ ಅವರು ದರ್ಶನ್ ಅಭಿಮಾನಿಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆಡಿಯೋ ವೈರಲ್ ಆಗಿತ್ತು. ಅದರಲ್ಲಿ ನಮ್ಮಹತ್ರ ಇರೋರೆಲ್ಲ ಹಾರ್ಡ್ ವರ್ಕ್ ಮಾಡೋರು. ದರ್ಶನ್ ಅಭಿಮಾನಿಗಳ ಥರ ತಲೆ ಮಾಂಸ ಕೇಳೋರು, ನೂರು ಕುರಿ ಕಳಿಸಿ ಅಂತ ಕೇಳೋರು ಯಾರೂ ಇಲ್ಲ ಎಂದು ಹೇಳಲಾಗಿತ್ತು ಎಂಬುದು ದರ್ಶನ್ ಅಭಿಮಾನಿಗಳ ಆರೋಪ.

Related Articles

Back to top button