Film & Entertainment

*ಕಲಿಯುಗದಲ್ಲಿ ದೇವರು ಕಲ್ಲಲ್ಲ, ಕರ್ಮ ಜೀವನವನ್ನು ಹಿಂಬಾಲಿಸುತ್ತದೆ: ನಟ ಜಗ್ಗೇಶ್*

ದರ್ಶನ್ ಪ್ರಕರಣ: ತೀಕ್ಷ್ಣವಾಗಿ ಟ್ವೀಟ್ ಮಾಡಿದ ನಟ ಜಗ್ಗೇಶ್

Home add -Advt


ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಡಿರುವ ಆರೋಪದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕೋರ್ಟ್ 6 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಇಡೀ ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿದೆ. ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡುವ ಮಟ್ಟಕ್ಕೆ ತಲುಪಿದ್ದು ದೊಡ್ದ ನಟನಾಗಿ ಇಂತಹ ಕೃತ್ಯವೆಸಗಿದರಲ್ಲ ಎಂದು ಜನರು ಬೈದುಕೊಳ್ಳುತ್ತಿದ್ದಾರೆ.

ನಟ-ನಟಿಯರು ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮದೇ ರೀತಿಯ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಹಿರಿಯ ನಟ, ನವರಸನಾಯಕ ಜಗ್ಗೇಶ್ ಟ್ವೀಟ್ ಮೂಲಕ ಮಾಮಿಕ ಮಾತುಗಳನ್ನು ಆಡಿದ್ದಾರೆ.

‘ಸರ್ವ ಆತ್ಮಾನೇನ ಬ್ರಹ್ಮ ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಜೀವ ನಿನಗಿಲ್ಲ’
‘ಕರ್ಮ ಜೀವನವನ್ನು ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನನ್ನು ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತತ್ ಕ್ಷಣ ಫಲಿತಾಂಶ ಉಂಟು.
ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’
‘ಮದಕ್ಕೆ ಕಾರುಣ್ಯದ ಅರಿವಿಲ್ಲಾ’ ಎಂದು ಬರೆದುಕೊಂಡಿದ್ದಾರೆ.

ಮದಕ್ಕೆ ಕಾರುಣ್ಯದ ಅರಿವಿಲ್ಲ ಎನ್ನುವ ಮೂಲಕ ಮದ ಇದ್ದವನಿಗೆ ಕರುಣೆ ಎಂಬುದಿಲ್ಲ. ಕರ್ಮ ಹಿಂಬಾಲಿಸುತ್ತದೆ ಹಾಗೂ ಕಲಿಯುಗದಲ್ಲಿ ದೇವರು ಕಲ್ಲಲ್ಲ ಎಂಬ ಮಾತನ್ನು ಹೇಳುವ ಮೂಲಕ ನಟ ಜಗ್ಗೇಶ್ ತೀಕ್ಷ್ಣವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿದ್ದಾರೆ.

Related Articles

Back to top button