Kannada NewsKarnataka NewsLatest

ಜಗಜ್ಯೋತಿ ಬಸವೇಶ್ವರರ ಕೈ ಭಗ್ನ: ಭಕ್ತರ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ರಾಮದುರ್ಗ–  ಬಿಜಗುಪ್ಪಿ ಗ್ರಾಮದಲ್ಲಿ ಜಗಜ್ಯೋತಿ‌ ಬಸವೇಶ್ವರರ ಮೂರ್ತಿ ಮೂರ್ತಿ ಭಗ್ನವಾಗಿದೆ.
      ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ಘಟನೆ ನಡೆದಿದ್ದು, ಬಸವಣ್ಣನವರ ಮೂರ್ತಿಯ ಕೈಯನ್ನು ಕಿಡಿಗೇಡಿಗಳು ಮುರಿದಿದ್ದಾರೆ.
 ಸುದ್ದಿ ತಿಳಿದ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
 ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲಿಸಿದರು. ಒಂದು ವಾರದ ಒಳಗಾಗಿ ಆರೋಪಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಒಂದು ತಿಂಗಳೊಳಗಾಗಿ ಭಗ್ನಗೊಂಡ ಮೂರ್ತಿ ಬದಲಾಯಿಸಿ ಹೊಸ ಮೂರ್ತಿ ಪ್ರತಿಷ್ಠಾಪನೆ ಮಾಡುವುದಾಗಿ‌ ಶಾಸಕ ಮಹಾದೇವಪ್ಪ ಯಾದವಾಡ ಭರವಸೆ ನೀಡಿದರು.
  ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.
https://youtu.be/jywErDgFacU

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button