Kannada NewsKarnataka NewsLatest

*ಜೈನಮುನಿ ಹತ್ಯೆ ಹಿಂದೆ ಉಗ್ರರ ಕೈವಾಡ ಶಂಕೆ; ಸರ್ಕಾರದ ನಡೆಯೇ ಅನುಮಾನಾಸ್ಪದವಾಗಿದೆ; ಶಾಸಕ ಸಿದ್ದು ಸವದಿ ಆರೋಪ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿಂದೆ ಭಯೋತ್ಪಾದಕರ ಕೈವಾಡವಿರುವ ಶಂಕೆ ಇದೆ ಎಂದು ಶಾಸಕ ಸಿದ್ದು ಸವದಿ ಆರೊಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದು ಸವದಿ, ಕರೆಂಟ್ ಶಾಕ್ ಕೊಟ್ಟು, ಚಿತ್ರಹಿಂಸೆ ನೀಡಿ ಜೈನಮುನಿ ಹತ್ಯೆ ಮಾಡಿದ್ದಾರೆ. ಜೈನಮುನಿ ಹತ್ಯೆ ಹಿಂದೆ ಉಗ್ರರ ಕೈವಾಡವಿದೆ. ಆದರೆ ಸರ್ಕಾರದ ನಡೆ ಸಂಶಯಾಸ್ಪದವಾಗಿದೆ ಎಂದು ಆರೋಪಿಸಿದರು.

ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಸ್ವಾಮೀಜಿಗಳು ಆರ್ಥಿಕ ವ್ಯವಹಾರ ಮಾದಿರುವ ಸಾಧ್ಯತೆ ಇಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸಿ ಸತ್ಯಾಸತ್ಯತೆ ಹೊರಬರಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ ಶಾಸಕ ಅಜಯ್ ಪಾಟೀಲ್ ಕೂಡ ಜೈನಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

Home add -Advt

Related Articles

Back to top button