ಪ್ರಗತಿವಾಹಿನಿ ಸುದ್ದಿ: ಇತ್ತಿಚಿಗೆ ಶಿಕ್ಷಣ ಇಲಾಖೆಯಲ್ಲಿ ಕೆಲವು ಬದಲಾವಣೆಗಳು ಆಗುತ್ತಿದ್ದು, ಈ ಬದಲಾವಣೆಗಳು ಜೈನ ಶಿಕ್ಷಣ ಸಂಸ್ಥೆಗಳಿಗೆ ಮಾರಕವಾಗುತ್ತಿವೆ.ಈ ನಿಟ್ಟಿನಲ್ಲಿ ಚಿಂತನೆ ನಡೆಸಲು ಇದೆ ನವೆಂಬರ್ 26 ರಂದು ಮಂಗಳವಾರ ಬೆಳಿಗ್ಗೆ 10-30 ಗಂಟೆಗೆ ಹಲಗಾ ಗ್ರಾಮದಲ್ಲಿರುವ ಭರತೇಶ ಎಜ್ಯುಕೇಶನ ಟ್ರಸ್ಟ ಸಂಸ್ಥೆಯ ಸಭಾಂಗಣದಲ್ಲಿ ಕರ್ನಾಟಕದ ಜೈನ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರ ಸಭೆಯನ್ನು ಕರೆಯಲಾಗಿದೆ.
ಈ ಸಭೆಯಲ್ಲಿ ಸರ್ಕಾರಕ್ಕೆ ಸಂಬಂಧಿಸಿದ ವಿವಿಧ ನೀತಿಗಳ ವಿಷಯಗಳನ್ನು ಚರ್ಚಿಸಲಾಗುವುದು. ಹಾಗಾಗಿ ಕರ್ನಾಟಕದ ಎಲ್ಲ ಜೈನ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕೆಂದು ಕೋರಲಾಗಿದೆ. ಈ ಸಭೆಯ ಹೆಚ್ಚಿನ ಮಾಹಿತಿಗಾಗಿ 8197772678 ಹಾಗೂ 9844907100 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ