Latest

*ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಖಾಸಗಿ ಶಾಲೆಗೆ ಬಾಂಬ್ ಬೆದರಿಕೆಯೊಡ್ಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಅಮೃತಹಳ್ಳಿಯಲ್ಲಿ ನಡೆದಿದೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಹಲವು ಖಾಸಗಿ ಶಾಲೆಗಳಿಗೆ ಪದೇ ಪದೇ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿದ್ದವು, ಎರಡು ದಿನಗಳ ಹಿಂದೆ 6 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಇ-ಮೇಲ್ ಮೂಲಕ ಸಂದೇಶ ರವಾನಿಸಲಾಗಿತ್ತು. ಆದರೆ ಪರಿಶೀಲನೆ ಬಳಿಕ ಇದೊಂದು ಹುಸಿಬಾಂಬ್ ಬೆದರಿಕೆ ಎಂಬುದು ತಿಳಿದುಬಂದಿದೆ.

ಈ ಘಟನೆ ಬೆನ್ನಲ್ಲೇ ಇದೀಗ ಅಮೃತಹಳ್ಳಿ ಬಳಿಯ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆಯೊಡ್ಡಲಾಗಿದೆ. ಮಧ್ಯರಾತ್ರಿ ಇ-ಮೇಲ್ ಸಂದೇಶ ರವಾನಿಸಲಾಗಿದ್ದು, ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಬಂದಿದೆ.

Home add -Advt

ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಭೇಟಿ ನೀಡಿ ತಪಾಸಣೆ ನಡೆಸಿದೆ.


Related Articles

Back to top button