*ಜೈನಮುನಿ ಹತ್ಯೆ ಕೇಸ್; ತನಿಖೆ ಹಂತದಲ್ಲಿ ದಿಕ್ಕು ತಪ್ಪಿಸುವುದು ಬೇಡ ಎಂದ ಶಾಸಕ ಲಕ್ಷ್ಮಣ ಸವದಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೈನಮುನಿ ಹತ್ಯೆ ಪ್ರಕರಣ ವಿಧಾನಸಭೆ ಕಲಾಪದಲ್ಲಿ ಚರ್ಚೆಯಾಗಿದ್ದು, ಬಿಜೆಪಿ ಸದಸ್ಯರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ.
ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ ಬಿಜೆಪಿ ಶಾಸಕ ಅಜಯ್ ಪಾಟೀಲ್, ಜೈನಮುನಿ ಹತ್ಯೆ ಪ್ರಕರಣದಲ್ಲಿ ಹಲವು ಅನುಮಾನಗಳಿವೆ. ತನಿಖೆ ಪೂರ್ಣವಾಗುವ ಮೊದಲೇ ಮಾಹಿತಿಗಳು ಸೋರಿಕೆಯಾಗಿವೆ. ಬಂಧಿತ ಆರೋಪಿಗಳ ಬಗ್ಗೆ ಸರಿಯಾಗಿ ಹೇಳುತ್ತಿಲ್ಲ. ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಗೆ ವಹಿಸಬೇಕು ಎಂದರು.
ಈ ವೇಳೆ ಮಾತನಾಡಿದ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ, ಪ್ರಕರಣವನ್ನು ಸರ್ಕಾರ ನಿಸ್ಪಕ್ಷಪಾತವಾಗಿ ತನಿಖೆ ನಡೆಸಬೇಕು ಎಂದು ಹೇಳಿದರು. ಈ ವೇಳೆ ಮಾತನಾಡಿದ ಶಾಸಕ ಅಭಯ್ ಪಾಟೀಲ್, ಹಣದ ವ್ಯವಹಾರದ ಬಗ್ಗೆಯೂ ತನಿಖೆಯಾಗಬೇಕು ಎಂದರು.
ಈ ವೇಳೆ ಮಾತು ಮುಂದುವರೆಸಿದ ಲಕ್ಷ್ಮಣ ಸವದಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ಹಂತದಲ್ಲಿ ದಿಕ್ಕು ತಪ್ಪಿಸುವುದು ಬೇಡ. ಈ ವಿಚಾರದಲ್ಲಿ ರಾಜಕಾರಣ ಬೆರೆಸುವುದು ಸರಿಯಲ್ಲ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ