*ನಂದಿ ಪರ್ವತ ಆಶ್ರಮಕ್ಕೆ ಭೇಟಿ ನೀಡಿ ಭಕ್ತಾದಿಗಳಿಗೆ ಸಾಂತ್ವನ ಹೇಳಿದ ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಇಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ, ಭಕ್ತಾದಿಗಳಿಗೆ ಸಾಂತ್ವನ ಹೇಳಿದರು.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಿಂದ ಆಘಾತವಾದ ಸಮಸ್ತ ಜೈನ ಸಮುದಾಯದ ಬಂಧುಗಳ, ಅಪಾರ ಸಂಖ್ಯೆಯ ಭಕ್ತರ ನೋವಿನಲ್ಲಿ ನಾವೆಲ್ಲ ಭಾಗಿಯಾಗಿದ್ದೇವೆ. ಆರೋಪಿಗಳಿಗೆ ಕಠಿಣ ಕ್ರಮ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈಗಾಗಲೇ ಗೃಹ ಸಚಿವರು ಜೈನ ಮುನಿ 1008 ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. ಸರ್ಕಾರ ಈ ಬಗ್ಗೆ ಸಾಕಷ್ಟು ಗಮನ ಹರಿಸಿದೆ. ಪ್ರಕರಣ ಭೇದಿಸುವಲ್ಲಿ ಪೊಲೀಸರು ತತಕ್ಷಣವೇ ಯಶಸ್ವಿಯಾಗಿದ್ದಾರೆ. ಇಂತಹ ಅಹಿಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು. ಸ್ವಾಮೀಜಿಗಳ ಹತ್ಯೆಯನ್ನು ಎಲ್ಲ ಪಕ್ಷಗಳು ಖಂಡನೆ ಮಾಡಿವೆ. ಪೊಲೀಸರ ಎಲ್ಲ ಆಯಾಮಗಳಿಂದಲೂ ತನಿಖೆ ಮಾಡಿದ್ದು, ಆರೋಪಿಗಳನ್ನು ಸಹ ಬಂಧಿಸಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವ ಅವಶ್ಯಕತೆ ಇಲ್ಲ. ಸಿಬಿಐನವರು ಮಾಡುವ ಕೆಲಸವನ್ನು ನಮ್ಮ ಪೊಲೀಸರೇ ಮಾಡಿದ್ದಾರೆ ಎಂದರು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಮಾಜಿ ಸಚಿವ ವೀರಕುಮಾರ ಪಾಟೀಲ್, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹಣಮನ್ನವರ್ ಸೇರಿದಂತೆ ಅನೇಕರು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ