Belagavi NewsBelgaum NewsKannada NewsKarnataka NewsLatest

*ಜೈನಮುನಿ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳು ಪೊಲೀಸ್ ಕಷ್ಟಡಿಗೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಚಿಕ್ಕೋಡಿ ಸೆಶನ್ಸ್ ಕೋರ್ಟ್ ಆದೇಶ ನೀಡಿದೆ.

ಜೈನಮುನಿ ಹತ್ಯೆ ಪ್ರಕರಣದ ಇಬ್ಬರು ಆರೊಪಿಗಳಾದ ನಾರಾಯಣ ಮಾಳಿ ಹಾಗೂ ಹಸನ್ ಸಾಬ್ ಎಂಬುವವರನ್ನು ಇಂದು ಚಿಕ್ಕೋಡಿ ಪೊಲೀಸರು ಚಿಕ್ಕೋಡಿ 7ನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ವೇಳೆ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್, ಜುಲೈ 17ರವರೆಗೆ 7 ದಿನಗಳ ಕಾಲ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.

ಕಸ್ಟಡಿಗೆ ಪಡೆದ ಬೆನ್ನಲ್ಲೇ ಪೊಲೀಸರು ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button