Kannada NewsLatestNational
*ಚಲಿಸುತ್ತಿದ್ದ ರೈಲಿನ ಮೇಲೆ ಗುಂಡಿನ ದಾಳಿ; ನಾಲ್ವರು ಪ್ರಯಾಣಿಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಮುಂಬೈ: ಚಲಿಸುತ್ತಿದ್ದ ರೈಲಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ನಾಲ್ವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಮಹರಾಷ್ಟ್ರದಲ್ಲಿ ನಡೆದಿದೆ.
ಜೈಪುರ ಎಕ್ಸ್ ಪ್ರೆಸ್ ರೈಲಿನಲ್ಲಿ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಪಾಲ್ಗಢದಲ್ಲಿ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಜಿಆರ್ ಪಿ ಪೊಲೀಸ್ ಹಾಗೂ ಆರ್ ಪಿ ಎಫ್ ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸಿದ್ದಾರೆ. ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬೊರಿಯಾವಲಿಯಾ ಹಾಗೂ ಮೀರಾ ರೋಡ್ ನಿಲ್ದಾಣದ ನಡುವೆ ಈ ಘಟನೆ ನಡೆದಿದೆ.



