ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲಶಕ್ತಿ ಯೋಜನೆ ಯನ್ನು ಬೆಳಗಾವಿ ಜಿಲ್ಲೆಯಲ್ಲಿ ಜಾರಿಗೊಳಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಕೇಂದ್ರ ಮಾನವಸಂಪನ್ಮೂಲ ಇಲಾಖೆಯ ಜಂಟಿ ಕಾರ್ಯದರ್ಶಿ ಗಿರೀಶ್ ಹೊಸೂರ್ ಯೋಜನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ಬೆಳಗಾವಿ ಜಿಲ್ಲೆಯ ಅಥಣಿ, ರಾಮದುರ್ಗ ಹಾಗೂ ಸವದತ್ತಿ ತಾಲೂಕು ಆಯ್ಕೆಯಾಗಿದೆ. ಗಿರೀಶ್ ಹೊಸೂರ್ ಬೆಳಗಾವಿ ಜಿಲ್ಲೆಗೆ ಉಸ್ತುವಾರಿ ಅಧಿಕಾರಯಾಗಿ ನೇಮಕವಾಗಿದ್ದಾರೆ.
ಅಂತರಜಲ ಹೆಚ್ಚಿಸುವ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗುತ್ತಿರುವ ಯೋಜನೆ ಇದಾಗಿದ್ದು, ಎಲ್ಲ ಇಲಾಖೆಗಳು, ಎಲ್ಲ ಯೋಜನೆಗಳನ್ನು ಸೇರಿಸಿ ಯೋಜನೆ ಜಾರಿಗೊಳಿಸಬೇಕಾಗಿದೆ.
ಬೆಳಗಾವಿಯಲ್ಲಿ ಮಾದರಿಯಾಗಿ ಯೋಜನೆ ಜಾರಿಗೊಳಿಸಲು ಎಲ್ಲರ ಸಹಕಾರಬೇಕು ಎಂದರು.
ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯ ಎಲ್ಲ ಇಲಾಖೆ, ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳು ಯೋಜನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.
ಜಿಲ್ಲಾ ಪಂಚಾಯತ ಸಿಇಓ ಕೆ.ವಿ.ರಾಜೇಂದ್ರ, ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೆ ಜಾರಿಗೊಂಡಿರುವ ಯೋಜನೆಗಳ ಮಾಹಿತಿ ನೀಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಅಭಿಪ್ರಾಯ ಮಂಡಿಸಿದರು. ಪ್ಯಾಸ್ ಫೌಂಡೇಶನ್ ಅಧ್ಯಕ್ಷ ಮಾಧವ ಪ್ರಭು ಜಾರಿಗೊಳಿಸಿರುವ ಯೋಜನೆಗಳ ವಿವರ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಬೂದೆಪ್ಪ ಎಚ್.ಬಿ. ಸೇರಿದಂತೆ, ವಿವಿಧ ಇಲಾಖೆಯ ಅಧಿಕಾರಿಗಳು, ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳ ಭಾಗವಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ