Kannada NewsKarnataka NewsLatest

*6ನೇ ಬಾರಿ ಅಂಬಾರಿ ಹೊರಲಿರುವ ಅಭಿಮನ್ಯು: ಜಂಬೂಸವಾರಿ ಮೆರವಣಿಗೆಯಲ್ಲಿ 14 ಆನೆಗಳು ಭಾಗಿ*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕ್ಯಾಪ್ಟನ್ ಅಭಿಮನ್ಯು ಆನೆ 6ನೇ ಬಾರಿಗೆ ತಾಯಿ ಚಾಮುಂಡಿ ದೇವಿ ವಿರಾಜಮಾನವಿಗಿರುವ ಅಂಬಾರಿಯನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದಾನೆ.

ಇಂದು ಸಂಜೆ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅದಿದೇವತೆ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಶುಭ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4:42ರಿಂದ 5:06ರ ನಡುವೆ ಸಲ್ಲುವ ಶುಭ ಮುಹೂರ್ತದಲ್ಲಿ ದಸರಾ ಜಂಬೂಸಾವಾರಿಗೆ ಚಾಲನೆ ನೀಡಲಿದ್ದಾರೆ.

750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ಆನೆ ಮೆರವಣಿಗೆಯಲ್ಲಿ ಸಾಗಲಿದೆ. ಅಭಿಮನ್ಯು ಜೊತೆಗೆ 14 ಆನೆಗಳು ಸಾಗಲಿವೆ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ, ರೂಪಾ, ಸೌಪತ್ ಆನೆಯಾಗಿ ಗೋಪಿ ಹಾಗೂ ನಿಶಾನೆಯಾಗಿ ಧನಂಜಯ, ಸಾಲಾನೆಗಳಾಗಿ ಮಹೇಂದ್ರ, ಶ್ರೀಕಂಠ, ಲಕ್ಷ್ಮೀ, ಕಂಜನ್, ಏಕಲವ್ಯ, ಭೀಮ, ಪ್ರಶಾಂತ, ಸುಗ್ರೀವ, ಹೇಮಾವತಿ ಪಾಲ್ಗೊಳ್ಳಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button