Cancer Hospital 2
Bottom Add. 3

*ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್; 36 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಬಸ್ ವೊಂದು ಕಂದಕಕ್ಕೆ ಉರುಳಿಬಿದ್ದ ಪರಿನಾಮ 36 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.

ಬಸ್ ನಲ್ಲಿ ಒಟ್ಟು 40 ಜನರು ಪ್ರಯಾಣಿಸುತ್ತಿದ್ದರು. ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರಂಗಲ್-ಅಸ್ಸಾರ್ ಬಳಿ ಬಸ್ ಸ್ಕಿಡ್ ಆಗಿ 300 ಅದಿ ಕಂದಕಕ್ಕೆ ಉರುಳಿ ಬಿದ್ದಿದೆ.

ಒಟ್ಟು 36 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗುತಿದೆ.

ಜಮ್ಮು-ಕಾಶ್ಮೀರದಲ್ಲಿ ಬಸ್ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂಪಾಯಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

Bottom Add3
Bottom Ad 2

You cannot copy content of this page