Latest

ಜಮ್ಮು-ಕಾಶ್ಮೀರದಲ್ಲಿ 8 ಭಯೋತ್ಪಾದಕರನ್ನು ಸದೆಬಡಿದ ಭದ್ರತಾ ಪಡೆ

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು-ಕಾಶ್ಮೀರ ಕಣಿವೆಯಲ್ಲಿ ಕಳೆದ 24 ಗಂಟೆಗಳಲ್ಲಿ 8 ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಈ ಪೈಕಿ ಪಾಂಪೋರ್‌ನ ಜಾಮಿಯಾ ಮಸೀದಿಯಲ್ಲಿ ಅಡಗಿದ್ದ ಇಬ್ಬರು ಉಗ್ರರನ್ನೂ ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಮಸೀದಿಯಲ್ಲಿ ಅಡಗಿದ್ದ ಉಗ್ರರ ಮೇಲೆ ನಡೆದ ದಾಳಿಯ ಸಂದರ್ಭದಲ್ಲಿ ಧಾರ್ಮಿಕ ಕಟ್ಟಡಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ದಿಲ್ಬಾಗ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಮಸೀದಿಯಲ್ಲಿ ಅಡಗಿದ್ದ ಭಯೋತ್ಪಾದಕರನ್ನು ಮೊದಲು ಮಸೀದಿ ಬಿಟ್ಟು ಹೊರಬರುವ ಅನಿವಾರ್ಯತೆ ಸೃಷ್ಟಿಸಿದ ಭದ್ರತಾ ಪಡೆಗಳು, ನಂತರ ಇಬ್ಬರನ್ನೂ ಹೊಡೆದುರುಳಿಸುವಲ್ಲಿ ಯಶಸ್ವಿಯಾದವು ಎಂದು ವಿವರಿಸಿದ್ದಾರೆ.

ಜಮ್ಮು-ಕಾಶ್ಮೀರದ ಅವಂತಿಪೋರಾ ಪ್ರದೇಶದ ಮೀನ್ ಗ್ರಾಮದಲ್ಲಿ ಗುರುವಾರ ಓರ್ವ ಭಯೋತ್ಪಾದಕನನ್ನು ಹಯೆಗೈಯ್ಯಲಾಗಿದೆ. ಅಲ್ಲದೇ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ನಡೆದ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಹತ್ಯೆಗೀಡಾದ ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದು ಗುರುತಿಸಲಾಗಿದೆ.

Home add -Advt

Related Articles

Back to top button