![](https://pragativahini.com/wp-content/uploads/2020/06/jammu-kashmir-8-terrorist-killed.jpg)
ಪ್ರಗತಿವಾಹಿನಿ ಸುದ್ದಿ: ಭಾರತದ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುತ್ತಿದ್ದ ಪಾಕಿಸ್ತಾನದ 7 ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಜಮ್ಮು-ಕಾಶ್ಮೀರದ ಕೃಷ್ಣಘಾಟಿ ಸೆಕ್ಟರ್ ನಲ್ಲಿ ಪಾಕ್ ಮೂಲದ 7 ಉಗ್ರರನ್ನು ಭದ್ರತಾ ಪಡೆ ಸಿಬ್ಬಂದಿಗಳು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಭಾರತದೊಳಗೆ ನುಗ್ಗಲು ಯತ್ನಿಸುತ್ತಿದ್ದ ಉಗ್ರರ ಯತ್ನವನ್ನು ವಿಫಲಗೊಳಿಸಲಾಗಿದೆ.
ಎಲ್ ಒಸಿ ಬಳಿ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಅಂತಿಮವಾಗಿ ಕೃಷ್ಣಘಾಟಿ ಸೆಕ್ಟರ್ ನಲ್ಲಿ ಭದ್ರತಾ ಪಡೆ ಸಿಬ್ಬಂದಿಗಳು 7 ಉಗ್ರರನ್ನು ಹತ್ಯೆಗೈದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ