National

*ಉಗ್ರರು ಹಾಗೂ ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ: ಓರ್ವ ಯೋಧ ಹುತಾತ್ಮ*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಗಡಿಯೊಳಗೆ ನುಸುಳುತ್ತಿದ್ದ ಉಗ್ರರನ್ನು ಹಿಮ್ಮೆಟಿಸುವ ಯತ್ನದಲ್ಲಿ ಓರ್ವ ಯೋಧ ಹುತಾತ್ಮರಾಗಿರುವ ಘಟನೆ ನಡೆದಿದೆ.

ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಅಖ್ನೂರ್ ಸೆಕ್ಟರ್ ನಲ್ಲಿ ಪಾಕಿಸ್ತಾನ ನುಸುಲುಕೋರರು ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಭಾರತೀಯ ಸೇನೆ ಹಾಗೂ ಪಾಕ್ ನುಸುಳುಕೋರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಭಾರತೀಯ ಯೋಧರೊಬ್ಬರಿಗೆ ಗುಂಡೇಟು ತಗುಲಿದ್ದು, ಸ್ಥಳದಲ್ಲೇ ಹುತಾತ್ಮರಾಗಿದ್ದಾರೆ.

ಜೂನಿಯರ್ ಕಮಿಷನ್ಡ್ ಆಫೀಸರ್ ಕುಲದೀಪ್ ಚಂದ್ ಹುತಾತ್ಮ ಸೈನಿಕ. ಈ ನಡುವೆ ಪಾಕ್ ನುಸುಳುಕೋರರ ವಿರುದ್ಧ ಕಾರ್ಯಾಚರಣೆ ಮುಂದುವರೆದಿದೆ.

Home add -Advt

Related Articles

Back to top button