ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ನಿಬಂಧನೆಗಳನ್ನು ರದ್ದು ಪಡಿಸಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಕೇಂದ್ರ ಸರ್ಕಾರದ 2019ರ ನಿರ್ಧಾರದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಕೇಂದ್ರ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ.
ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರ ನ್ಯಾಯಮೂರ್ತಿಗಳ ಪೀಠ ಈ ತೀರ್ಪು ಪ್ರಕಟಿಸಿದೆ. ಜಮ್ಮು-ಕಾಶ್ಮೀರಕ್ಕೆ ಆರ್ಟಿಕಲ್ 370ನ್ನು ರದ್ದು ಪಡಿಸಿರುವ ಕ್ರಮ ಸೂಕ್ತ ಎಂದು ಹೇಳಿದೆ.
ಸೆ.30 2024ರೊಳಗೆ ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ರಾಜ್ಯತ್ವವನ್ನು ಮರುಸ್ಥಾಪಿಸುವಂತೆ ಹೇಳಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ