*ಜಮ್ಮು-ಕಾಶ್ಮೀರದಲ್ಲಿ ಭೀಕರ ಉಗ್ರರ ದಾಳಿ: ಭಯೋತ್ಪಾದಕರ ರೇಖಾ ಚಿತ್ರ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ ೨೬ ಪ್ರವಾಸಿಗರು ಬಲಿಯಾಗಿದ್ದಾರೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭೀಕರ ಹತ್ಯಾಕಾಂಡದಲ್ಲಿ ಭಾಗಿಯಾದ ಮೂವರು ಉಗ್ರರ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಭಯೋತ್ಪಾದಕ ದಾಳಿಯಲ್ಲಿ ಆಸಿಫ್ ಫೌಜಿ, ಸುಲೇಮಾನ್ ಶಾ ಹಾಗೂ ಅಬು ತಲ್ಹಾ ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಭದ್ರತಾಪಡೆಗಳು ಬೃಹತ್ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಆರಂಭಿಸಿದ್ದು, ಉಗ್ರರಿಗಾಗಿ ಶೋಧ ಕಾರ್ಯ ಚುರುಕುಗೊಂಡಿದೆ. ಭಯೋತ್ಪಾದಕರನ್ನು ಪತ್ತೆ ಮಾಡಲು ಹೆಲಿಕಾಪ್ಟರ್ ಗಳನ್ನು ನಿಯೋಜಿಸಲಾಗಿದೆ. Home … Continue reading *ಜಮ್ಮು-ಕಾಶ್ಮೀರದಲ್ಲಿ ಭೀಕರ ಉಗ್ರರ ದಾಳಿ: ಭಯೋತ್ಪಾದಕರ ರೇಖಾ ಚಿತ್ರ ಬಿಡುಗಡೆ*