Film & Entertainment

*ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ ನಮ್ಮ ರಾಷ್ಟ್ರದ ಚೈತನ್ಯದ ಮೇಲೆ ನಡೆದ ದಾಳಿ: ಉಗ್ರರ ದಾಳಿ ಖಂಡಿಸಿದ ನಟ ಕಿಚ್ಚ ಸುದೀಪ್*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ 28 ಜನರು ಬಲಿಯಾಗಿದ್ದು, ಹತ್ತಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಯೋತ್ಪಾದಕರ ದಾಳಿ ಬಗ್ಗೆ ರಾಷ್ಟ್ರಾದ್ಯಂತ ಕಹ್ಂಡನೆ ವ್ಯಕ್ತವಾಗಿದೆ. ನಟ ಕಿಚ್ಚ ಸುದೀಪ್ ಇದು ಸಂಯಮದ ಸಮಯವಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸುದೀಪ್, ಪಹಲ್ಗಾಮ್ ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದಿರುವ ಕ್ರೂರ ದಾಳಿ ಹೃದಯವಿದ್ರಾವಕ ಘಟನೆ. ಇದು ಕೇವಲ ವ್ಯಕ್ತಿಗಳ ಮೇಲೆ ನಡೆದಿರುವ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲೆ ನಡೆಸಲಾಗಿರುವ ದಾಳಿ. ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡುವ ಸಮಯ ಎಂದು ಹೇಳಿದ್ದಾರೆ.

ಈ ಹೇಯ ಕೃತ್ಯದಲ್ಲಿ ಭಾಗಿಯಾಗಿರುವವರ ವಿರುದ್ಧ ಶೀಘ್ರವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button