ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. 10 ವರ್ಷಗಳ ಬಳಿಕ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಯುತ್ತಿದೆ. ಆರ್ಟಿಕಲ್ 371 ರದ್ದು ಬಳಿಕ ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನವಣಾ ಆಯುಕ್ತರು ಜಮ್ಮು-ಕಾಶ್ಮೀರದ 90 ಕ್ಷೇತ್ರಗಳಿಗೆ 3 ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 18ರಂದು ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 25ರಂದು 2ನೇ ಹಂತದಲ್ಲಿ 26 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 1ರಂದು 3ನೇ ಹಂತದಲ್ಲಿ 40 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ