
ಪ್ರಗತಿವಾಹಿನಿ ಸುದ್ದಿ: ನೆಲಬಾಂಬ್ ಸ್ಫೋಟಗೊಂಡು ಓರ್ವ ಸೇನಾ ಯೋಧ ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾದಲ್ಲಿ ನೆಲಬಾಂಬ್ ಸ್ಫೋಟಗೊಂಡಿದ್ದು, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಮೂವರು ಯೋಧರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.