
ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಕನ್ನಡಿಗರು ಸೇರಿ 28 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿರುವ ಉಗ್ರರನ್ನು ಹೆಡೆಮುರು ಕಟ್ಟಲು ಭಾರತೀಯ ಸೇನೆ ಬೃಹತ್ ಕಾರ್ಯಾಚರಣೆ ಆರಂಭಿಸಿದೆ. ಈಗಾಗಲೇ ಪಹಲ್ಗಾಮ್ ನಲ್ಲಿ ಉಗ್ರರ ಎರಡು ಮನೆಗಳನ್ನು ಧ್ವಂಸಗೊಳಿಸಿದೆ. ಇದರ ಬೆನ್ನಲ್ಲೇ ಲಕ್ಷ್ಕರ್-ಎ-ತೊಯ್ಬಾ ಕಮಾಂಡರ್ ನನ್ನು ಹತ್ಯೆ ಮಾಡಲಾಗಿದೆ.
ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಸೇನೆ ನಡೆಸಿದ ಅತಿದೊಡ್ಡ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾದ ಕಮಾಂಡರ್ ಓರ್ವನನ್ನು ಹತ್ಯೆ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಓರ್ವ ಯೋಧ, ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ.
ಪಹಲ್ಗಾಮ್ ಸೇರಿದಂತೆ ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸೇನೆಯ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಂಡಿದೆ.