ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು-ಕಾಶ್ಮೀರದ ಮಾಜಿ ಸಚಿವ ಚೌದರಿ ಐಜಾಜ್ ನಿವಾಸದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಾಜಿ ಸಚಿವ ಚೌದರಿ ಐಜಾಜ್ ಅವರ ಎರಡಂತಸ್ಥಿನ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಹೀಟರ್ ಬ್ಲಾಸ್ಟ್ ಆಗಿ ಈ ಬೆಂಕಿ ಅವಘಡ ಸಂಭವಿಸಿರಬೇಕು ಎಂದು ಶಂಕೆ ವ್ಯಕ್ತವಾಗಿದೆ.
ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ